ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

Update: 2017-08-20 15:29 GMT

ಡಂಬುಲಾ, ಆ.20: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ರಂಗಿರಿಯ ಡಂಬುಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಗೆಲುವಿಗೆ 217 ರನ್‌ಗಳ ಸವಾಲನ್ನು ಪಡೆದ ಭಾರತ 28.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 220 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ಆರಂಭಿಕ ದಾಂಡಿಗ ಶಿಖರ್ ಧವನ್ ಔಟಾಗದೆ 132 ರನ್(90ಎ, 20ಬೌ,3ಸಿ) ಮತ್ತು ನಾಯಕ ವಿರಾಟ್ ಕೊಹ್ಲಿ ಔಟಾಗದೆ 82 ರನ್(70ಎ, 10ಬೌ,1ಸಿ) ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ಆರಂಭಿಕ ದಾಂಡಿಗ ರೋಹಿತ್ ಶರ್ಮ 4 ರನ್ ಗಳಿಸಿ ರನೌಟಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News