ದೇವರಾಜ ಅರಸು ಎಲ್ಲರ ಮನದಲ್ಲಿ ಅಜರಾಮರ: ಸಚಿವ ಪ್ರಮೋದ್

Update: 2017-08-20 16:32 GMT

ಉಡುಪಿ, ಆ.20: ರಾಜ್ಯ ಕಂಡ ಅಪ್ರತಿಮ ರಾಜಕಾರಣಿ ಹಾಗೂ ಜನ ಸಾಮಾನ್ಯರ ಮನದಲ್ಲಿ ಚಿರಸ್ಥಾಯಿಯಾಗಿ ಉಳಿದ ಮಹಾನ್ ಮುಖ್ಯಮಂತ್ರಿ ದೇವರಾಜ್ ಅರಸ್ ಎಂದು ರಾಜ್ಯ ಮೀನುಗಾರಿಕೆ, ಯುವಜನಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಬನ್ನಂಜೆ ಶ್ರೀನಾರಾ ಯಣಗುರು ಸಭಾಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ನಾಯಕ, ಪರಿ ವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ 102ನೆ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡುತ್ತಿದ್ದರು.

ಹಿಂದುಳಿದವರ ಬದುಕು ಕಟ್ಟಲು ಶಾಶ್ವತ ಅಡಿಪಾಯ ಹಾಕಿದ ಅರಸು, ದುಡಿಯುವವನೇ ಹೊಲದೊಡೆಯ ಕಾನೂನನ್ನು ಅನುಷ್ಠಾನಕ್ಕೆ ತಂದು ಎಲ್ಲರ ಮನದಲ್ಲಿ ಅಜರಾಮರರಾದರು. ಅಂದಿನ ಕಷ್ಟದ ಸಮಯದಲ್ಲೂ ಹಿಂದು ಳಿದವರ ಬಗ್ಗೆ ಚಿಂತಿಸಿ ಕಾನೂನು ಯಥಾವತ್ತಾಗಿ ಅನುಷ್ಠಾನಕ್ಕೆ ತಂದ ಕೀರ್ತಿ ದೇರಾಜು ಅರಸು ಅವರದ್ದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಮಾತನಾಡಿ, ಅವಿರತ ಶ್ರಮದಿಂದ ಅತ್ಯುತ್ತಮ ಆಡಳಿತ ನೀಡಿದ ಅರಸು ಅವರು ಎಲ್ಲರಿಗೂ ಮಾದರಿ. ಕರ್ತವ್ಯ ನಿಷ್ಠೆ ಅವರನ್ನು ಬಹು ಎತ್ತರಕ್ಕೆ ಏರಿಸಿದ್ದು, ಇಂದಿನ ವಿದ್ಯಾರ್ಥಿಗಳು ಸರಕಾರದ ಸವಲತ್ತುಗಳನ್ನು ಉಪಯೊೀಗಿಸಿ ಉತ್ತಮ ರಾಗಬೇಕು ಎಂದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಶಿವಾನಂದ ಕಾಪಸಿ, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಹರೀಶ್ ಗಾಂವಕರ್, ಎಚ್‌ಡಿಎಫ್‌ಸಿ ಬ್ಯಾಂಕಿನ ಮ್ಯಾನೇಜರ್ ಕೃಷ್ಣ ಪ್ರಸಾದ್ ಉಪಸ್ಥಿತರಿದ್ದರು.

ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ವೈ.ಭಾಸ್ಕರ ಶೆಟ್ಟಿ ಉಪ ನ್ಯಾಸ ನೀಡಿದರು. ಜಿಲ್ಲೆಯ ಹಾಸ್ಟೆಲ್‌ಗಳಲ್ಲಿದ್ದುಕೊಂಡು ಎಸೆಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದವರಿಗೆ ಬಹುಮಾನವನ್ನು ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News