×
Ad

ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ-ದೇವರಾಜ ಅರಸು ಜನ್ಮ ದಿನಾಚರಣೆ

Update: 2017-08-20 22:25 IST

ಮಂಗಳೂರು, ಆ. 20: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯು ಜಿಲ್ಲಾ ಕಾಂಗ್ರೆಸ್ ಮಾಜಿ ಹಂಗಾಮಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್‌ರ ಅಧ್ಯಕ್ಷತೆಯಲ್ಲಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆಯಿತು.

ರಾಜೀವ್ ಗಾಂಧಿ ಹಾಗೂ ದೇವರಾಜ ಅರಸುರವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಪಂಚಾಯತ್ ರಾಜ್ ಮಸೂದೆಯನ್ನು ಪರಿಣಾಮಕಾರಿಯಾಗಿ ಜಾಾರಿ ಮಾಡಿದ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿಯು ರಾಜೀವ್ ಗಾಂಧೀಜಿಗೆ ಸಲ್ಲುತ್ತದೆ. ದಿ. ಇಂದಿರಾ ಗಾಂಧೀಜಿ ಜಾರಿಗೊಳಿಸಿದ ಭೂಮಸೂದೆ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಭಾರತದಲ್ಲಿಯೇ ಒಬ್ಬ ಕ್ರಾಂತಿಕಾರಿ ಮುಖ್ಯಮಂತ್ರಿ ಎಂಬ ಕೀರ್ತಿಗೆ ದೇವರಾಜ ಅರಸು ಪಾತ್ರರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯಸಚೇತಕ ಐವನ್ ಡಿಸೋಜ, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಕೆಪಿಸಿಸಿ ಕಾರ್ಯದರ್ಶಿಗಳಾದ ಮಮತಾ ಗಟ್ಟಿ, ನವೀನ್ ಡಿಸೋಜ, ಮೇಯರ್ ಕವಿತಾ ಸನಿಲ್, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಅಶೋಕ್ ಕುಮಾರ್ ಡಿ.ಕೆ., ಟಿ.ಕೆ.ಶೈಲಜಾ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎಸ್.ಕರೀಂ, ಕೆಪಿಸಿಸಿ ಸದಸ್ಯರಾದ ಆರ್.ಕೆ.ಪೃಥ್ವಿರಾಜ್, ಬಲರಾಜ್ ರೈ, ಸದಾಶಿವ ಉಳ್ಳಾಲ, ಸಂತೋಷ್ ಕುಮಾರ್ ಶೆಟ್ಟಿ, ಕರಾವಳಿ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಯು.ಬಿ.ಸಲೀಂ, ಪದ್ಮನಾಭ ಅಮೀನ್, ಯೂಸುಫ್ ಉಚ್ಚಿಲ, ಸುಬೋಧ್ ಆಳ್ವ, ನವಾಝ್ ಜೆಪ್ಪು, ಯೂಸುಫ್ ಖಾದರ್, ಬಶೀರ್ ಬೈಕಂಪಾಡಿ, ತೆರೇಸಾ ಪಿಂಟೊ, ಸಿ.ಎಂ.ಮುಸ್ತಫಾ, ಮಮತಾ ಶೆಟ್ಟಿ, ಫವಾಝ್ ಸುಳ್ಯ, ಕಿರಣ್ ಬುಡ್ಲೆಗುತ್ತು, ನಝೀರ್ ಬಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News