ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ಬಿ.ಸಿ.ಎ ಕೋರ್ಸ್ ಉದ್ಘಾಟನೆ

Update: 2017-08-20 17:16 GMT

ಮಂಗಳೂರು, ಆ.20: ನಗರದ ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಗೊಂಡ ಬಿ.ಸಿ.ಎ ಕೋರ್ಸ್‌ನ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು.

ಮಂಗಳೂರು ವಿವಿ ಕುಲಸಚಿವ ಪ್ರೊ.ಕೆ.ಎಂ. ಲೋಕೇಶ್ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಣಿ ಶ್ರೀವತ್ಸಾ, ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಉದಯ ಕುಮಾರ್ ಉಪಸ್ಥಿತರಿದ್ದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ವಾಸುದೇವ ಶೆಣೈ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News