ಬಂಟ್ವಾಳ: ದೇವರಾಜ ಅರಸು ಜನ್ಮದಿನಾಚರಣೆ

Update: 2017-08-20 17:23 GMT

ಬಂಟ್ವಾಳ, ಆ. 20: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಬಂಟ್ವಾಳ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣನ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 102ನೆ ಜನ್ಮದಿನಾಚರಣೆಯನ್ನು ರವಿವಾರ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ನಡೆಯಿತು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕ ದೇವರಾಜ ಅರಸುರವರ ಬದ್ದತೆಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಲೇಖಕಿ ರೇಷ್ಮ ಭಟ್ ವಿಶೇಷ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ತಾಲೂಕು ಪಂಚಾಯತ್ ಉಪಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂಡ, ಕೆಡಿಪಿ ಸದಸ್ಯ ಪದ್ಮನಾಭ ನರಿಂಗಾಣ ಹಾಜರಿದ್ದರು.

ಬಿಸಿಎಂ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಜಯಣ್ಣ ಸ್ವಾಗತಿಸಿದರು. ತಹಶೀಲ್ದರ್ ಪುರಂದರ ಹೆಗ್ಡೆ ಪ್ರಸ್ತಾವಿಸಿದರು, ನಿಲಯಪಾಲಕ ಶಿವಣ್ಣ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News