ಕಲ್ಲಿದ್ದಲು ಪ್ರಕರಣಗಳಲ್ಲಿ ತನಿಖೆ ಅಪೂರ್ಣ: ಸಿಬಿಐ ವಿರುದ್ಧ ಸುಪ್ರೀಂ ಅಸಮಾಧಾನ

Update: 2017-08-21 12:45 GMT

ಹೊಸದಿಲ್ಲಿ,ಆ.21: ಕಲ್ಲಿದ್ದಲು ಗಣಿ ಹಂಚಿಕೆ ಹಗರಣ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸದ್ದಕ್ಕಾಗಿ ಸಿಬಿಐ ವಿರುದ್ಧ ಸರ್ವೋಚ್ಚ ನ್ಯಾಯಾಲಯವು ಸೋಮವಾರ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿತು.

ಈ ಪ್ರಕರಣಗಳಲ್ಲಿ ನಡೆಯುತ್ತಿರುವ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಾವು ಸಿಬಿಐಗೆ ಪದೇಪದೇ ಸೂಚಿಸಿದ್ದೆವು, ಆದರೆ ತನಿಖೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ ಎಂದು ನ್ಯಾ.ಮದನ ಬಿ.ಲೋಕೂರ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಹೇಳಿತು.

 ಬಾಕಿಯುಳಿದಿರುವ ಎಲ್ಲ ಪ್ರಕರಣಗಳಲ್ಲಿ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಆದೇಶಿಸಿದ ಪೀಠವು, ಮುಂದಿನ ವಿಚಾರಣೆಯನ್ನು ಅ.9ಕ್ಕೆ ನಿಗದಿಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News