ವಿದ್ಯಾರ್ಥಿಗಳು ಶಿಸ್ತನ್ನು ಅಳವಡಿಸಿಕೊಂಡಾಗ ಉತ್ತಮ ಸಾಧನೆ ಮಾಡಲು ಸಾಧ್ಯ: ಶಾಸಕ ಆರ್.ನರೇಂದ್ರ

Update: 2017-08-21 14:08 GMT

ಹನೂರು, ಆ.21: ವಿದ್ಯಾರ್ಥಿಗಳು ಜೀವನದಲ್ಲಿ ಪಠ್ಯ ಹಾಗೂ ಕ್ರೀಡೆಯ ಜೊತೆಗೆ ಶಿಸ್ತನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಸಹಯೋಗದಲ್ಲಿ 2017-18 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕಳೆದ ವರ್ಷಗಳಲ್ಲಿ ಹನೂರು ಶೈಕ್ಷಣಿಕ ವಲಯದ ಹಲವಾರು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ನಮಗೆ ಹೆಮ್ಮೆ ತರುವಂತ ವಿಷಯ ಹಾಗೆಯೇ ಪ್ರಸ್ತುತ ವರ್ಷದಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ತಾಲೂಕಿಗೆ ಕೀರ್ತಿ ತರುವಂತರಾಗಿ ಎಂದು ಶುಭ ಹಾರೈಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಇದರಲ್ಲಿ ಭಾಗವಹಿಸುವುದು ಅತೀ ಮುಖ್ಯವಾಗಿರುತ್ತದೆ. ಅಲ್ಲದೆ ಆಟೋಟಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ನಮ್ಮಲ್ಲಿರುವ ತಪ್ಪುಗಳನ್ನು ತಿದ್ದುಕೊಂಡು ನಮ್ಮ ಬೆಳವಣಿಗೆಯು ಸಹ ಆಗುವುದು. ಹಾಗೆ ಶಿಕ್ಷಕರು ಮಕ್ಕಳ ಆಸಕ್ತಿ ಗನುಗುಣವಾಗಿ ಅವರ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಎಂದು ತಿಳಿಸಿದರು. ಮತ್ತು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವ ಮೂಲಕ ಕ್ರೀಡಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

 ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಬಸವರಾಜು, ಜಿಪಂ ಸದಸ್ಯ ಲೇಖಾ ರವಿಕುಮಾರ್, ತಾಪಂ ಅಧ್ಯಕ್ಷ ರಾಜು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಜಾವೆದ್ ಅಹ್ಮದ್, ಸದಸ್ಯರಾದ ನಟರಾಜು, ಪಪಂ ಅಧ್ಯಕ್ಷ ಮಮತಾ ಮಹದೇವ್, ಉಪಾಧ್ಯಕ್ಷ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ  ಕೆ.ಮಹದೇವಪ್ಪ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News