×
Ad

ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಸಭೆ

Update: 2017-08-21 23:11 IST

ಮಂಗಳೂರು, ಆ.21: ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಮಹಾಸಭೆ ಹಾಗೂ ನೇರ ಸಂವಾದ ಕಾರ್ಯಕ್ರಮವು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ಜಕ್ಕಪ್ಪಣ್ಣವರ್ ಮಾತನಾಡಿ, ದ.ಕ.ಜಿಲ್ಲೆಯಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಪೂರಕವಾದ ಕೆಲಸ ಕಾರ್ಯಗಳು ನಡೆಯುತ್ತಿವೆ. ಪರಿಶಿಷ್ಟ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರಕಾರ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಕುದ್ಮುಲ್ ರಂಗರಾವ್ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ನಿರ್ಮಿಸುತ್ತಿರುವುದು ಶ್ಲಾಘನೀಯ. ಮಂಗಳೂರಿನ ಪುರಭವನಕ್ಕೆ ರಂಗರಾವ್‌ರ ಹೆಸರನ್ನು ಪ್ರಸ್ತಾವಿಸಿರುವುದು ಅಭಿನಂದನೀಯ ಎಂದರು.

 ಎಐಸಿಸಿ ಉಸ್ತುವಾರಿಯಾದ ಡಾ.ಸಿರಿವೆಲ್ಲಾ ಪ್ರಸಾದ್, ಜಿಲ್ಲಾ ಘಟಕದ ಅಧ್ಯಕ್ಷ ಶೇಖರ್ ಕುಕ್ಕೇಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಪ್ರಸನ್ನ ಕುಮಾರ್, ಹಾಜಿ ಇಬ್ರಾಹೀಂ ಕೋಡಿಜಾಲ್, ಪದ್ಮನಾಭ ನರಿಂಗಾನ, ಉಪಮೇಯರ್ ರಜನೀಶ್, ಬಲರಾಜ್ ರೈ, ಸದಾಶಿವ ಉಳ್ಳಾಲ, ವಸಂತಿ, ಅಬ್ದುಲ್ಲಾ ಬಿನ್ನು ಅಮೀನ್, ಪ್ರೇಮನಾಥ ಬಳ್ಳಾಲ್‌ಬಾಗ್, ದಿನೇಶ್ ಪಿ.ಎಸ್., ಉಪಸ್ಥಿತರಿದ್ದರು.

 ಕಾರ್ಯಕ್ರಮದಲ್ಲಿ ರಘುರಾಜ್ ಕದ್ರಿ ಸ್ವಾಗತಿಸಿದರು. ದಿನೇಶ್ ವಂದಿಸಿದರು. ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News