ಆ.27 ರಂದು ಡಾ. ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ

Update: 2017-08-22 12:37 GMT

ಬೆಂಗಳೂರು, ಆ.22: ಡಾ. ವಿಷ್ಣುವರ್ಧನ್ ಸೇನಾ ಸಮಿತಿ ವತಿಯಿಂದ ಆ. 22 ರಂದು ಹೊಸದಿಲ್ಲಿಯ ಕರ್ನಾಟಕ ಸಂಘದ ಭವನದಲ್ಲಿ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡದ ಮೇರು ನಟ ಡಾ.ವಿಷ್ಣುವರ್ಧನ್ ಕುರಿತು ರಾಷ್ಟ್ರೀಯ ಉತ್ಸವವನ್ನು ಹೊಸದಿಲ್ಲಿ ಕರ್ನಾಟಕ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಚಲನಚಿತ್ರ ಅಕಾಡಮಿ ಸಹಯೋಗದೊಂದಿಗೆ ಮೊದಲ ಬಾರಿಗೆ ದಿಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಂದು ಬೆಳಗ್ಗೆ 6ಕ್ಕೆ ಆಸ್ಟ್ರೇಲಿಯಾದ ಬಲರಾಮ್ ಅವರು, ವಿಷ್ಣು ಭಾವಚಿತ್ರಕ್ಕೆ ಪೂಜೆ ಸಲ್ಲಿಸುತ್ತಾರೆ. ಅನಂತರ ನಡೆಯಲಿರುವ ವಿಷ್ಣು ಭಾವಚಿತ್ರ ಮೆರವಣಿಗೆಗೆ ಕರ್ನಾಟಕ ಸಂಘದ ಅಧ್ಯಕ್ಷ ವಸಂತಶೆಟ್ಟಿ ಚಾಲನೆ ನೀಡುವರು. ಬೆಳಗ್ಗೆ 9ಕ್ಕೆ ಕಸಾಪ ರಾಜ್ಯಾಧ್ಯಕ್ಷ ಮನುಬಳಿಗಾರ್ ವಿಷ್ಣುವರ್ಧನ್ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 9.30ಕ್ಕೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ವಿಷ್ಣುವರ್ಧನ್ ಛಾಯಾಚಿತ್ರ ಪ್ರದರ್ಶನ, ನೆನಪಿನೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದರು.

ಬೆಳಗ್ಗೆ 10ಕ್ಕೆ ಖ್ಯಾತ ಸಾಹಿತಿ ಪುರುಷೋತ್ತಮ ಬಿಳಿಮಲೆ ಉತ್ಸವದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಿರ್ದೇಶಕರು ಕಂಡಂತೆ ಡಾ.ವಿಷ್ಣುವರ್ಧನ್ ಹಾಗೂ ಕರ್ನಾಟಕ ಸಾಂಸ್ಕೃತಿಕ ಲೋಕಕ್ಕೆ ಡಾ.ವಿಷ್ಣವರ್ಧನ್ ಕೊಡುಗೆಗಳು ವಿಚಾರ ಮಂಡನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 3.30್ಕಕೆ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಸಿಂಹಾವಲೋಕನ ಕೃತಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ಅನಂತ್‌ ಕುಮಾರ್, ಮಾಜಿ ಶಾಸಕ ಎಚ್.ಎಂ.ರೇವಣ್ಣ, ಕಲಾವಿದ ಶಿವರಾಂ, ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಆಗಮಿಸಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News