ಆ.27 ರಂದು ಕುಂದಣಗಾರ ವಿಚಾರ ಸಂಕಿರಣ

Update: 2017-08-22 12:40 GMT

ಬೆಂಗಳೂರು, ಆ.22: ಕರ್ನಾಟಕ ವಿಶ್ವಕರ್ಮ ಸಾಹಿತ್ಯ ಕಲಾ ಅಕಾಡಮಿ ವತಿಯಿಂದ ಆ.27ರಂದು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಪ್ರೊ.ಕೆ.ಜಿ.ಕುಂದಣಗಾರರ ಬದುಕು-ಬರಹ ಕುರಿತಂತೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ವಿ. ಅಂಬಾಮಣಿ ಮೂರ್ತಿ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಬಡ ವಿಶ್ವಕರ್ಮ ಕುಟುಂಬದಲ್ಲಿ ಜನಿಸಿದ ಕುಂದಣರು 5 ವರ್ಷಗಳ ಕಾಲ ನಿಸ್ವಾರ್ಥದಿಂದ ಕನ್ನಡ ಸಾಹಿತ್ಯಕ್ಕೆ ಹಲವು ಪ್ರಕಾರಗಳಲ್ಲಿ ಅದ್ಭುತ ಕೊಡುಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅವರ ಬದುಕು ಕುರಿತಂತೆ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದರು.

ಅಂದು ನಡೆಯುವ ವಿಚಾರ ಸಂಕಿರಣವನ್ನು ಹಿರಿಯ ಸಾಹಿತಿ ಡಾ.ಹಂಪಾ ನಾಗರಾಜಯ್ಯ ಉದ್ಘಾಟಿಸಲಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ಇದೇ ವೇಳೆ ಕುಂದಣಗಾರರ ಬರಹ-ಬದುಕು ಕುರಿತ ಸಂಶೋಧನಾ ಬರಹಗಳ ವಿಷಯಕ್ಕೆ ಸಂಬಂಧಿಸಿದಂತೆ ಡಾ. ಸಿ.ಯು.ಮಂಜುನಾಥ್ ಅವರು ಪ್ರಬಂಧ ಮಂಡಿಸಲಿದ್ದಾರೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News