ಶಿಡ್ಲಘಟ್ಟ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

Update: 2017-08-22 19:01 GMT

ಶಿಡ್ಲಘಟ್ಟ,ಆ.22 : ಪಠ್ಯದ ಜೊತೆಗೆ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು. ಪ್ರತಿಯೊಂದು ಮಗುವಿಗೂ ತನ್ನದೇ ಆಯ್ಕೆಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶ ಸಿಗಬೇಕು ಎಂದು ತಾಲ್ಲೂಕು ಪಂಚಾಯತ್ ಸದಸ್ಯ ಬಿ.ವಿ.ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಶೆಟ್ಟಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲ. ಗುಣಮಟ್ಟದ ಶಿಕ್ಷಣ, ಬಿಸಿಯೂಟ, ಕ್ರೀಡಾ ತರಬೇತಿ, ಸಾಂಸ್ಕೃತಿಕ ಕಲಿಕೆ, ಸೈಕಲ್, ಸಮವಸ್ತ್ರ ಮುಂತಾದ ಎಲ್ಲಾ ಸೌಲಭ್ಯ ಹಾಗೂ ಕಲಿಕೆಗಳು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತವೆ. ಆದರೆ ಪೋಷಕರು ಈ ಬಗ್ಗೆ ಆಸಕ್ತಿ ವಹಿಸಬೇಕು. ಸರ್ಕಾರಿ ಶಾಳೆಗಳನ್ನು ಉಳಿಸಲು ಸಮುದಾಯ ಜತೆಗೂಡಬೇಕು ಎಂದು ಹೇಳಿದರು.

 ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದೆ. ಪ್ರತಿಭಾ ಕಾರಂಜಿಗೆ ಸರ್ಕಾರದಿಂದ ಹಣ ಬರುತ್ತಿಲ್ಲ. ದಾನಿಗಳ ಸಹಕಾರದಿಂದ ಪ್ರತಿಭಾ ಕಾರಂಜಿಯನ್ನು ನಡೆಸುವಂತಾಗಿದೆ ಎಂದು ಹೇಳಿದರು.

 ಈ ಸಂದರ್ಭದಲ್ಲಿ 17 ಶಾಲೆಗಳ ವಿದ್ಯಾರ್ಥಿಗಳು ಕೋಲಾಟ, ಜನಪದ ನೃತ್ಯ, ಖವಾಲಿ, ದೇಶಭಕ್ತಿ ಗೀತೆ, ರಸಪ್ರಶ್ನೆ ಕಾರ್ಯಕ್ರಮ, ಕಂಠಪಾಠ, ಚಿತ್ರಕಲೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ, ಅಭಿನಯ ಗೀತೆ,ಆಶುಭಾಷಣ, ಛದ್ಮವೇಷ ಇನ್ನೂ ಮುಂತಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು,

 ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಹಂಡಿಗನಾಳ ಗ್ರಾಮ ಪಂಚಾಯ್ತಿ ಸದಸ್ಯ ಎ.ಎಂ.ತ್ಯಾಗರಾಜ್, ಬಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುಷ್ಪ ಗಂಗಾಧರ್, ಉಪಾಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಸದಸ್ಯ ವೆಂಕಟರೆಡ್ಡಿ, ಸೊಣ್ಣೇಗೌಡ, ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮೀಪತಿ, ಸದಸ್ಯರಾದ ವೆಂಕಟರೆಡ್ಡಿ, ಬೈರಾರೆಡ್ಡಿ, ಉಮಾವತಿ, ಶಾರದ, ಸುಜಾತ, ನಳಿನ, ಸಮಾಜ ಸೇವಕ ಮಂಜುನಾಥ್, ಶಿಕ್ಷಕರಾದ ಬಿ.ಆರ್.ನಾರಾಯಣಸ್ವಾಮಿ, ಮಂಜುನಾಥ್, ನಳಿನಾಕ್ಷಿ, ಚಂದ್ರಶೇಖರ್ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News