ಕೋಲಾರದಲ್ಲಿ ಮೂರು ಮಕ್ಕಳ ಸಾವು: ವರದಿ ನೀಡಲು ಸಿಎಂ ಸೂಚನೆ

Update: 2017-08-22 16:14 GMT

ಬೆಂಗಳೂರು, ಆ.22: ಕೋಲಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿರುವ ಬಗ್ಗೆ ಸಮಗ್ರ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದ್ದಾರೆ.

ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಮೃತಪಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ, ಶೀಘ್ರದಲ್ಲಿಯೇ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಖಡಕ್ ಸೂಚನೆ ನೀಡಿದ್ದಾರೆ.

ಈ ಮಕ್ಕಳು ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ಸ್ಪಷ್ಟ ಮಾಹಿತಿ ಇಲ್ಲದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ನೀಡಲು ಆರೋಗ್ಯ ಇಲಾಖೆಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News