ನರೇಂದ್ರ ಮೋದಿ ವೈಫಲ್ಯಗಳನ್ನು ಜನತೆಗೆ ವಿವರಿಸಿ : ವಿಷ್ಣುನಾಥನ್

Update: 2017-08-22 17:04 GMT

ಮೂಡುಬಿದಿರೆ, ಆ. 22: ಪ್ರಧಾನಿ ನರೇಂದ್ರ ಮೋದಿ ಮಾತಿನಲ್ಲೇ ದೇಶದ ಜನರನ್ನು ಮರುಳು ಮಾಡುತ್ತಿದ್ದಾರೆ. ಅವರು ಹೇಳುತ್ತಿರುವುದೆಲ್ಲವೂ ಶುದ್ಧ ಸುಳ್ಳು. ಚುನಾವಣೆಯಲ್ಲಿ ಗೆದ್ದು ಬಂದರೆ ತಾನು ವಿದೇಶದಲ್ಲಿದ್ದ ಕಪ್ಪು ಹಣವನ್ನೆಲ್ಲಾ ತಂದು ದೇಶದ ಬಡಜನರ ಖಾತೆಗೆ ಹಾಕುವುದಾಗಿ ನಂಬಿಸಿದ್ದ ಮೋದಿ ಯಾರ ಖಾತೆಗೂ ಹಣ ಹಾಕಿಲ್ಲ. ಕೇಂದ್ರ ಸರಕಾರದ ಈ ವೈಫಲ್ಯಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ತಲುಪಿಸಬೇಕು ಎಂದು ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ವಿಷ್ಣುನಾಥ ಹೇಳಿದರು.

ಅವರು ಇಲ್ಲಿನ ಸಮಾಜ ಮಂದಿರ ಸಭಾದ ಅಮರಾವತಿ ಸಭಾಂಗಣದಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರಕಾರವು ಜನಪರ ಆಡಳಿತದ ಯಶಸ್ವಿ 4 ವರ್ಷಗಳನ್ನು ಪೂರ್ತಿಗೊಳಿಸಿದ್ದು, ಚುನಾವಣಾ ಪೂರ್ವ ಜನತೆಗೆ ನೀಡಿದ್ದ ಪ್ರಣಾಳಿಕೆಯ ಶೇ.95ರಷ್ಟು ಭರವಸೆಗಳನ್ನು ಈಡೇರಿಸಿದೆ. ಬಿಜೆಪಿಯು ಜನರೆಡೆಯಲ್ಲಿ ವೈಷಮ್ಯ ಭಿತ್ತುವ ಮೂಲಕ ಕೋಮು ಅಜೆಂಡವನ್ನು ಹೊಂದಿದ ಪಕ್ಷವಾಗಿದೆ. ಆದರೆ ಜಾತ್ಯಾತೀತ ಸಿದ್ಧಾಂತವು ಕಾಂಗ್ರೆಸ್‌ನ ಮೂಲ ಮಂತ್ರವಾಗಿದ್ದು ಆ ನಿಟ್ಟಿನಲ್ಲಿಯೇ ಸಮಾಜಕ್ಕೆ ಅದು ನಾಯಕತ್ವ ನೀಡುತ್ತಾ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಶಾಸಕ ಕೆ. ಅಭಯಚಂದ್ರ ಜೈನ್ ಮಾತನಾಡಿ ಬಡವರ ಪರ ಕಾಳಜಿ ಹೊಂದಿರುವ ರಾಜ್ಯ ಕಂಡ ಶ್ರೇಷ್ಠ ಮುಖ್ಯಮಂತ್ರಿ ಸಿದ್ದರಾಮಯ್ಯ. ರಾಜ್ಯದಲ್ಲಿ ವಿವಿಧ ಜನಪರ ಯೋಜನೆಗಳ ಮೂಲಕ ದೇಶದಲ್ಲಿಯೇ ಗಣನೀಯ ಸಾಧನೆ ಮಾಡಿರುವ ರಾಜ್ಯಗಳ ಸಾಲಿನಲ್ಲಿ ಪ್ರಮುಖವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಜನರು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷವು ನನಗೆ ಸಾಕಷ್ಟು ಅವಕಾಶಗಳನ್ನುನೀಡಿದ್ದು ಪಕ್ಷಕ್ಕೆ ಋಣಿಯಾಗಿದ್ದೇನೆ. ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತೇನೆ ಎಂದ ಅವರು ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ಐವನ್ ನಿಗ್ಲಾ, ಶಾಸಕ ವೆಂಕಟೇಶ, ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್‌ಪಿ ದಿನೇಶ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷೆ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮತ್ತಿತರರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಬಿ. ಹಾಜರ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲೋಕೇಶ್ ಹೆಗ್ಡೆ, ಮೂಡುಬಿದಿರೆ ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ ಶೆಟ್ಟಿ, ಮುಖಂಡರುಗಳಾದ ದಿನಕರ ಬಿ.ಶೆಟ್ಟಿ, ನವೀನ್ ಡಿಸೋಜ, ಕಳ್ಳಿಗೆ ತಾರನಾಥ ಶೆಟ್ಟಿ, ಸಂಜೀವ ಮೊಲಿ, ಮೋನಪ್ಪ ಶೆಟ್ಟಿ ಎಕ್ಕಾರು, ಸಂಪತ್ ಸಾಮ್ರಾಜ್ಯ, ಪದ್ಮಪ್ರಸಾದ್ ಜೈನ್, ಮೂಡಾ ಅಧ್ಯಕ್ಷ ಸುರೇಶ್ ಪ್ರಭು, ಜಿಲ್ಲಾ ಯೋಜನಾ ಸಮಿತಿಯಸದಸ್ಯ ಸುರೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರತ್ನಾಕರ ಸಿ. ಮೊಲಿ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಪ್ರಿಯಾ ಡಿ. ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News