ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್ ಪಿಯು ಕಾಲೇಜು ಚಾಂಪಿಯನ್

Update: 2017-08-22 17:37 GMT

ಮೂಡುಬಿದಿರೆ, ಆ. 22: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ಬ್ಯಾಡ್ಮಿಂಟನ್‌ನಲ್ಲಿ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಕಿನ್ನಿಕಂಬಳದ ರೋಸಾಮಿಸ್ತಿಕ ಪಿಯು ಕಾಲೇಜಿನಲ್ಲಿ ನಡೆದ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲೂ ಕಟೀಲು ದುರ್ಗಾಪರಮೇಶ್ವರಿ ಪ.ಪೂ ಕಾಲೇಜಿನ ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಂಡಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News