ವಿಧಾನಪರಿಷತ್ ಉಪಚುನಾವಣೆ: ಸಿ.ಎಂ.ಇಬ್ರಾಹೀಂ ಅವಿರೋಧ ಆಯ್ಕೆ ನಿಶ್ಚಿತ

Update: 2017-08-22 18:49 GMT

ಬೆಂಗಳೂರು, ಆ.22: ವಿಧಾನಪರಿಷತ್ ಉಪಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹೀಂ ಅವಿರೋಧ ಆಯ್ಕೆಯಾಗುವುದು ಬಹುತೇಕ ನಿಶ್ಚಿತವಾಗಿದೆ.

ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ.

ಸಲ್ಲಿಕೆಯಾಗಿರುವ ಏಕೈಕ ನಾಮಪತ್ರದ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ಎಸ್.ಮೂರ್ತಿ, ನಾಮಪತ್ರ ಕ್ರಮಬದ್ಧವಾಗಿದೆ. ಚುನಾವಣಾ ಕಣದಲ್ಲಿ ಇಬ್ರಾಹೀಂ ಹೊರತುಪಡಿಸಿ ಬೇರೆ ಯಾರೂ ಅಭ್ಯರ್ಥಿಗಳಿಲ್ಲದ ಕಾರಣ ಆ.24ರಂದೆ ಅವರ ಅವಿರೋಧ ಆಯ್ಕೆ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News