ಬೆಂಗಳೂರು: ಸೆ.2ರಂದು ಬಕ್ರೀದ್ ಆಚರಣೆ
Update: 2017-08-23 18:34 IST
ಬೆಂಗಳೂರು, ಆ.23: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಬಕ್ರೀದ್ ಹಬ್ಬವನ್ನು ಸೆ. 2ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನ ಸಗೀರ್ ಅಹ್ಮದ್ ತಿಳಿಸಿದ್ದಾರೆ.
‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ಅವರು, ಆ. 22ರಂದು ದಿಲ್ಲಿ ಸೇರಿದಂತೆ ದೇಶದ ಹೆಚ್ಚಿನ ಭಾಗಗಳಲ್ಲಿ ದುಲ್‌ಹಜ್ ಮಾಸದ ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೆ. 2ರಂದು ಬಕ್ರೀದ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಆದರೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೆ.1ರಂದು ಬಕ್ರೀದ್ ಆಚರಿಸಲಾಗುತ್ತಿದೆ ಎಂದು ಮೌಲಾನ ಸಗೀರ್ ಅಹ್ಮದ್ ಹೇಳಿದರು.