ಆಗಸ್ಟ್ 26 ರಂದು ನೇರ ಫೋನ್ ಇನ್ ಕಾರ್ಯಕ್ರಮ
Update: 2017-08-23 19:12 IST
ಚಾಮರಾಜನಗರ, ಆ. 23 : ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಗಸ್ಟ್ 26 ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆ ಸಮಸ್ಯೆಗಳಿದ್ದಲ್ಲಿ ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ದೂರವಾಣಿ ಸಂಖ್ಯೆ 08226-224888 ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಕೋರಿದ್ದಾರೆ.