×
Ad

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

Update: 2017-08-23 20:45 IST

ನಾಗಮಂಗಲ, ಆ.23: ತಂದೆಯೇ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಟಿ.ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಯರಾಂ(45) ಎಂಬಾತ ತನ್ನ ಇಬ್ಬರು ಹೆಣ್ಣು ಮಕ್ಕಳಾದ ಸೌಭಾಗ್ಯ (4) ಮತ್ತು ಹರ್ಷಿಕ(2) ಅವರನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಯರಾಂಗೆ ಇಬ್ಬರು ಹೆಂಡತಿಯರಿದ್ದು, ಎರಡನೆ ಹೆಂಡತಿಯ ಮಕ್ಕಳನ್ನು ನೇಣಿಗೆ ಹಾಕಿ ಕೊಂದಿದ್ದಾನೆ. ಘಟನೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ತನಿಖೆ ಕೈಗೊಂಡಿದ್ದೇವೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News