×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2017-08-23 22:00 IST

ಪಡುಬಿದ್ರೆ, ಆ.23: ನಂದಿಕೂರು ಅಂಗನವಾಡಿಯ ಬಳಿಯ ನಿವಾಸಿ ಸಲ್ಮಾನ್ (23) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಆ.22 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಗುಂಡಿಬೈಲು ಶಾಲೆಯ ಬಳಿ ನಿವಾಸಿ ಗಣೇಶ್ ನಾಯ್ಕ್(52) ಎಂಬವರು ಆ.22ರಂದು ರಾತ್ರಿ ವೇಳೆ ಮನೆಯ ಹಿಂಭಾಗದ ಶೆಡ್ಡಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಬೆಳ್ವೆ ಗ್ರಾಮದ ಹೊನ್ಕಲ್ ನಿವಾಸಿ  ಅಶ್ವಿನಿ(23) ಎಂಬವರು ಆ.22 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News