ಉಡುಪಿ: ರಾಜ್ಯ ಮಟ್ಟದ ಪಯನಿಯರಿಂಗ್ ಸಾಹಸ ಶಿಬಿರ

Update: 2017-08-23 16:45 GMT

ಉಡುಪಿ, ಆ.23: ರೋವರ್ಸ್‌-ರೇಂಜರ್ಸ್‌ರ ರಾಜ್ಯ ಮಟ್ಟದ ಪಯನಿಯರಿಗ್ ಮತ್ತು ಸಾಹಸಮಯ ಶಿಬಿರವು ಮಣಿಪಾಲದ ಪ್ರಗತಿ ನಗರದಲ್ಲಿರುವ ಡಾ. ವಿ.ಎಸ್. ಆಚಾರ್ಯ ಸ್ಕೌಟ್ ಗೈಡ್ ತರಬೇತಿ ಕೇಂದ್ರದಲ್ಲಿ ಆ.27ರಿಂದ 31 ವರೆಗೆ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ 300ಕ್ಕೂ ಅಧಿಕ ರೋವರ್-ರೇಂಜರ್ ವಿದ್ಯಾಥಿಗರ್ಳು ಇದರಲ್ಲಿ ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಮೈಸೂರು -ಬೆಂಗಳೂರು ವಿಭಾಗೀಯ ಮಟ್ಟದ ಈ ಶಿಬಿರದ ಉದ್ಘಾಟನೆ ಆ.27ರಂದು ಸಂಜೆ 5:30ಕ್ಕೆ ಪ್ರಗತಿನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷರಾದ ಪ್ರೀಯಾಂಕ ಮೇರಿ ಫ್ರಾನ್ಸಿಸ್ ವಹಿಸಲಿದ್ದಾರೆ.

ಶಿಬಿರದ ಸಮಾರೋಪ ಸಮಾರಂಭ ಆ.31ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತೆ ಶಾಂತಾ ವಿ. ಆಚಾರ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಟ್ರಸ್ಟಿ ಪ್ರಕಾಶ್‌ಚಂದ್ರ ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News