×
Ad

ಪ್ರತ್ಯೇಕ ಧರ್ಮದ ವಿಚಾರ ನಾವು ಹುಟ್ಟು ಹಾಕಿಲ್ಲ: ಸಿಎಂ ಸಿದ್ದರಾಮಯ್ಯ

Update: 2017-08-23 22:22 IST

ಬೆಂಗಳೂರು, ಆ.23: ವೀರಶೈವ ಮಹಾಸಭಾದ ಕಾರ್ಯಕ್ರಮದಲ್ಲಿ ಪ್ರತ್ಯೇಕ ಧರ್ಮದ ವಿಚಾರ ಪ್ರಸ್ತಾಪ ಆಯಿತು. ಎಲ್ಲರೂ ಒಟ್ಟಾಗಿ ಬಂದರೆ ಈ ವಿಚಾರದಲ್ಲಿ ತೀರ್ಮಾನ ಮಾಡಬಹುದು ಎಂದು ಹೇಳಿದ್ದೆ. ಇದನ್ನು ನಾವು ಹುಟ್ಟು ಹಾಕಿದ್ದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ವಿವಿಧ ಮಠಾಧೀಶರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ವಿಚಾರದಲ್ಲಿ ಹಲವಾರು ನಿಯೋಗಗಳು ತಮ್ಮನ್ನು ಭೇಟಿಯಾಗಿವೆ. ಒಂದಾಗಿ ಬನ್ನಿ ಎಂದು ಎಲ್ಲರಿಗೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ ಎಂದರು.

ಪ್ರತ್ಯೇಕ ಧರ್ಮದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯವಾಗಿ ಲಾಭ ಮಾಡಿಕೊಳ್ಳುವ ಉದ್ದೇಶ ನಮಗಿಲ್ಲ. ನೀವೆಲ್ಲ ಕೂತು ಚರ್ಚೆ ಮಾಡಿ, ಒಮ್ಮತದ ನಿರ್ಧಾರಕ್ಕೆ ಬನ್ನಿ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News