×
Ad

ಶಶಿಕಲಾ ಮರು ಪರಿಶೀಲನೆ ಅರ್ಜಿ ತಿರಸ್ಕೃತ

Update: 2017-08-23 22:25 IST

ಹೊಸದಿಲ್ಲಿ, ಆ. 23: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ನನ್ನ ವಿರುದ್ಧ ನೀಡಲಾದ 4 ವರ್ಷಗಳ ಜೈಲು ಶಿಕ್ಷೆ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಬಂಧಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

ಮರು ಪರಿಶೀಲನೆ ಅರ್ಜಿಯನ್ನು ಮುಕ್ತ ನ್ಯಾಯಾಲಯದ ವಿಚಾರಣೆ ಮೂಲಕ ನಡೆಸಬೇಕು ಎಂಬ ಮನವಿಯನ್ನು ಕೂಡ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಶಶಿಕಲಾ ಹಾಗೂ ಇತರ ಅಪರಾಧಿಗಳನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಲಿಖಿತ ಪ್ರತಿಪಾದನೆಯನ್ನು ಸುಪ್ರೀಂ ಕೋರ್ಟ್ ದಾಖಲಿಸಿಕೊಂಡಿತು. ಪ್ರಕರಣಕ್ಕೆ ಸಂಬಂಧಿಸಿ ಶಶಿಕಲಾ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಪರಿಶೀಲಿಸಿತು ಹಾಗೂ ತಿರಸ್ಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News