ವಿಚ್ಛೇದನ ಕೇಸ್ ವಾಪಸ್ ಪಡೆದ ಸುದೀಪ್ ದಂಪತಿ

Update: 2017-08-24 06:43 GMT

 ಬೆಂಗಳೂರು, ಆ.24: ಕನ್ನಡದ ಸುಪ್ರಸಿದ್ಧ ನಟ ಸುದೀಪ್ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

 ಸುದೀಪ್ ಹಾಗೂ ಅವರ ಪತ್ನಿ ಪ್ರಿಯಾ ವಿಚ್ಛೇದನ ಕೋರಿ 2015ರಲ್ಲಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಎರಡು ವರ್ಷಗಳ ಬಳಿಕ ಮಗಳಿಗಾಗಿ ಮತ್ತೆ ಒಂದಾಗಲು ನಿರ್ಧರಿಸಿದ್ದು, ಕೇಸ್ ವಾಪಸ್ ಪಡೆದಿದ್ದಾರೆ.

ಸುದೀಪ್ ದಂಪತಿ 9 ಬಾರಿ ವಿಚಾರಣೆಗೆ ಗೈರು ಹಾಜರಾಗಿದ್ದು, ಗುರುವಾರ ವಿಚಾರಣೆಗೆ ಹಾಜರಾಗಲೇಬೇಕೆಂದು ಹಿಂದಿನ ವಿಚಾರಣೆಯಲ್ಲಿ ನ್ಯಾಯಾಧೀಶರು ತಿಳಿಸಿದ್ದರು. ಆದರೆ, ಸುದೀಪ್ ಪರ ವಕೀಲರು ಇಂದು ನ್ಯಾಯಾಲಯಕ್ಕೆ ಹಾಜರಾಗಿ ಕೇಸ್ ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News