×
Ad

ಸುರಕ್ಷತೆಗೆ ಹೆಚ್ಚಿನ ಆದ್ಯತೆ: ಲೋಹಾನಿ

Update: 2017-08-24 17:33 IST

ಹೊಸದಿಲ್ಲಿ,ಆ.24: ಸುರಕ್ಷತೆಗೆ ತಾನು ಹೆಚ್ಚಿನ ಆದ್ಯತೆಯನ್ನು ನೀಡುವುದಾಗಿ ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಅಶ್ವನಿ ಲೋಹಾನಿ ಅವರು ಗುರುವಾರ ಇಲ್ಲಿ ಹೇಳಿದರು.

ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಬೆನ್ನುಬೆನ್ನಿಗೆ ಸಂಭವಿಸಿದ ಎರಡು ಭಾರೀ ರೈಲು ಅಪಘಾತಗಳ ಬಳಿಕ ಮಹತ್ವದ ಬೆಳವಣಿಗೆಯಲ್ಲಿ ಇಂದು ರೇಲ್ ಭವನದಲ್ಲಿ ರೈಲ್ವೆ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅವರು, ಸುರಕ್ಷತೆ ತನ್ನ ಮೊದಲ ಆದ್ಯತೆಯಾಗಿರಲಿದೆ. ಜೊತೆಗೆ ರೈಲ್ವೆ ಆವರಣಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಮತ್ತು ನಿಲ್ದಾಣಗಳ ಸುಧಾರಣೆಗೆ ಪ್ರಯತ್ನಿಸುವುದಾಗಿ ಹೇಳಿದರು.

ರೈಲು ದೇಶದ ಜೀವನಾಡಿಯಾಗಿರುವುದರಿಂದ ಭ್ರಷ್ಟಾಚಾರ ಮತ್ತು ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲೂ ತಾನು ಪ್ರಯತ್ನಿಸುವುದಾಗಿ ಅವರು ನುಡಿದರು.

 22 ಜನರು ಮೃತಪಟ್ಟು,200ಕ್ಕೂ ಅಧಿಕ ಜನರು ಗಾಯಗೊಂಡಿರುವ ಎರಡು ಅಪಘಾತಗಳು ಬೆನ್ನುಬೆನ್ನಿಗೇ ಸಂಭವಿಸಿದ ಹಿನ್ನೆಲೆಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷರಾಗಿದ್ದ ಎ.ಕೆ.ಮಿತ್ತಲ್ ಅವರು ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಭಾರತೀಯ ರೈಲ್ವೆಯ 1980ನೇ ತಂಡದ ಮೆಕ್ಯಾನಿಕಲ್ ಇಂಜಿನಿಯರ್ಸ್ ಸೇವೆಗೆ ಸೇರಿರುವ ಲೋಹಾನಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ಬುಧವಾರ ನೇಮಕಗೊಳಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News