ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಮಾವೇಶ
ಮಂಗಳೂರು, ಆ.24: ನಗರ ಹೊರವಲಯದ ಮುಕ್ಕದಲ್ಲಿರುವ ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಬಿ.ಟೆಕ್. ವಿದ್ಯಾರ್ಥಿಗಳ ಮತ್ತು ಪೋಷಕರ ಸಮಾವೇಶ, ಸ್ವಾಗತ ದಿನ ಹಾಗೂ ಓರಿಯೆಂಟೇಶನ್ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಜರಗಿತು.
ಶ್ರೀನಿವಾಸ್ ವಿವಿ ಕುಲಪತಿ ಹಾಗೂ ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಎ. ರಾಘವೇಂದ್ರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಕುಲಪತಿ ಹಾಗೂ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಶ್ರೀನಿವಾಸ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುಲಸಚಿವ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ. ಡಿ. ಶ್ರೀನಿವಾಸ್ ಮಯ್ಯ, ಅಭಿವೃದ್ಧಿ ವಿಭಾಗದ ಕುಲಸಚಿವ ಡಾ. ಅಜಯ್, ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮುಖ್ಯಸ್ಥ ಡಾ. ಪ್ರಕಾಶ್ ಬಿ., ಡಾ. ರಾಮಕೃಷ್ಣ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ.ಶ್ರೀನಾಥ್ ರಾವ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಬಿ.ಎಂ. ವಂದಿಸಿದರು.
ಉಪನ್ಯಾಸಕಿ ಪ್ರೀತಿ ರಾವ್ ಮತ್ತು ನಿಖಿತಾ ಸೌರಬ್ ಕಾರ್ಯಕ್ರಮ ನಿರೂಪಿಸಿದರು.