ಕರ್ನಾಟಕ ರಾಜ್ಯದ ಬಿಜೆಪಿ ಉಸ್ತುವಾರಿಯಾಗಿ ಜಾವ್ಡೇಕರ್ ನೇಮಕ
Update: 2017-08-24 20:01 IST
ಬೆಂಗಳೂರು, ಆ.24: ರಾಜ್ಯ ಬಿಜೆಪಿಯ ನೂತನ ಉಸ್ತುವಾರಿಯಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್‌ರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ.
ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯೆಲ್‌ರನ್ನು ನೇಮಿಸುವ ಮೂಲಕ, ಇಬ್ಬರು ಕೇಂದ್ರ ಸಚಿವರಿಗೆ ರಾಜ್ಯ ಬಿಜೆಪಿಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ರನ್ನು ರಾಜ್ಯಕ್ಕೆ ಮತ್ತೆ ಕರೆಸಿಕೊಳ್ಳಲಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಸಂಘಪರಿವಾರದ ಮುಖಂಡರ ಕೊಲೆಗಳ ವಿರುದ್ಧ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಕಾರ್ಯಕ್ರಮದ ಉಸ್ತುವಾರಿಯನ್ನು ಅಮಿತ್ ಶಾ ಅವರಿಗೆ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಬಿಜೆಪಿಯಲ್ಲಿನ ಗುಂಪುಗಾರಿಕೆ, ಭಿನ್ನಮತವನ್ನು ಶಮನಗೊಳಿಸುವಲ್ಲಿ ಮುರಳೀಧರ್ ರಾವ್ ವಿಫಲವಾಗಿರುವುದರಿಂದ ಅವರಿಗೆ ಉಸ್ತುವಾರಿ ಹೊಣೆಗಾರಿಕೆಯಿಂದ ಬಿಡುಗಡೆ ಮಾಡಲಾಗಿದೆ.