×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2017-08-24 20:47 IST

ಬೆಂಗಳೂರು, ಆ.24: ನಗರದ ಎರಡು ಕಡೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಆಡುಗೋಡಿ: ಚಿನ್ನಯ್ಯನಪಾಳ್ಯದ ನಿವಾಸಿ ಸಂಜಯ್‌ದರ್ಗ್(48) ಎಂಬುವರು ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಶವವನ್ನು ಸೆಂಟ್‌ಜಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಅಮೃತಹಳ್ಳಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಶಂಕರ್(45) ಎಂಬುವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮದ್ಯ ಸೇವನೆ ಚಟ ಹೊಂದಿದ್ದರು ಎನ್ನಲಾಗಿದೆ.

ಗುರುವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಶಂಕರ್ ಮನೆಯಿಂದ ಹೊರಗೆ ಹೋಗಿ ಅಮೃತಹಳ್ಳಿ ಸರಕಾರಿ ಶಾಲೆಯ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಎಂದು ಅಮೃತಹಳ್ಳಿ ಠಾಣಾ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News