×
Ad

ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2017-08-24 23:41 IST

ಮದ್ದೂರು, ಆ.24: ಮಳವಳ್ಳಿ ರಸ್ತೆಯ ಉಪ್ಪಿನಕೆರೆ ಗೇಟ್ ಬಳಿ ಬುಧವಾರ ಸಂಜೆ ಪಾದಚಾರಿಗೆ  ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಪ್ಪಿನಕೆರೆ ಗ್ರಾಮದ ಬಸವರಾಜು(55) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಬಸವರಾಜು ತನ್ನ ಗದ್ದೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News