ಬಿಎಸ್‌ವೈ ವಿರುದ್ಧದ ಪ್ರಕರಣದ ವಿಚಾರಣೆಗೆ ಸುಪ್ರೀಂ ಸಮ್ಮತಿ
Update: 2017-08-25 12:47 IST
ಹೊಸದಿಲ್ಲಿ, ಆ.25: ಮಾಜಿ ಮುಖ್ಯ ಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ನ್ಯಾಯಮೂರ್ತಿ ಚಲಮೇಶ್ವರ ನೇತೃತ್ವದ ದ್ವಿಸದಸ್ಯ ಪೀಠ ನಡೆಸಲಿದೆ.
ಡಿನೋಟಿಫಿಕೇಷನ್‌ಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಸಲ್ಲಿಸಲಾಗಿದ್ದ 15 ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರ ಜೊತೆ ಸಿರಾಜಿನ ಬಾಷಾ ಎಂಬವರು ಅರ್ಜಿ ಸಲ್ಲಿಸಿದ್ದರು.
ರಾಜ್ಯ ಸರಕಾರ ಮತ್ತು ಸಿರಾಜುನ್ ಬಾಷಾ ಸಲ್ಲಿಸಿದ್ದ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ನಡೆಸಲಿದೆ. ಸರಕಾರದ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 8 ವಾರಗಳ ಕಾಲ ಮುಂದೂಡಿದೆ