×
Ad

ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Update: 2017-08-26 20:15 IST

ಬೆಂಗಳೂರು, ಆ.26: ಮನೆಯ ಬೀಗ ಮುರಿದು 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಲ್ಲಿನ ಸಂಜಯ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂಜಯ್‌ನಗರದ ಸಿದ್ದ ವಿನಾಯಕ ರಸ್ತೆಯಲ್ಲಿನ 1ನೆ ಮುಖ್ಯರಸ್ತೆಯಲ್ಲಿನ ಸುರೇಶ್ ಎಂಬವರ ಮನೆಯ ಬೀಗ ಮುರಿದು ಕಳವು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಣೇಶ ಹಬ್ಬದ ಆಚರಣೆಗಾಗಿ ಕುಟಂಬಸ್ಥರು ಊರಿಗೆ ಹೋಗಿದ್ದ ವೇಳೆ ಮನೆಯ ಬೀಗ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಶ್ವಾನದಳ, ಬೆರಳಚ್ಚು ತಜ್ಞರ ಜತೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News