ಖಾಸಗಿತನದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ: ವೆಂಕಟೇಶ್
Update: 2017-08-26 20:25 IST
ಬೆಂಗಳೂರು, ಆ. 26: ಖಾಸಗಿತನ ಪ್ರತಿಯೊಬ್ಬ ಪ್ರಜೆಯ ಹಕ್ಕು ಹಾಗೂ ವೈಯಕ್ತಿಕ ಸ್ವಾತಂತ್ರದ ಸಹಜ ಅಂಗ. ಅದನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ನೀಡಿರುವ ಮಹತ್ವ ತೀರ್ಪನ್ನು ಹಿರಿಯ ವಕೀಲ ಬಿ.ಟಿ. ವೆಂಕಟೇಶ್ ಸ್ವಾಗತಿಸಿದ್ದಾರೆ.
ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಖಾಸಗಿತನ ಮೂಲಭೂತ ಹಕ್ಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಜನಪರವಾದದ್ದು ಎಂದು ಶ್ಲಾಘಿಸಿದರು.
ಅತಿಸಣ್ಣ ಸಮುದಾಯಕ್ಕೂ ಖಾಸಗಿತನದ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಹೇಳುವ ಮೂಲಕ ಕೋರ್ಟ್ ಪ್ರತಿಯೊಬ್ಬ ಪ್ರಜೆಯ ಖಾಸಗಿತನವನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.
ರಾಷ್ಟ್ರೀಯ ಭದ್ರತೆ ಹಾಗೂ ಆಹಾರ ಮತ್ತು ಇತರ ಸರಕಾರದ ಸಂಬಂಧಿಸಿದಂತೆ ಆಧಾರ್ ಸಂಖ್ಯೆ ಬಳಸುವುದರಿಂದ ಖಾಸಗಿತನದ ಉಲ್ಲಂಘನೆಯಾಗುತ್ತಿತ್ತು. ಸದ್ಯ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಇನ್ನು ಮುಂದೆ ಖಾಸಗಿತನಕ್ಕೆ ಭಂಗವಿಲ್ಲ ಎಂದರು.