ಉಸಿರಾಟದಲ್ಲಿ ತೊಂದರೆ: ಗರ್ಭಿಣಿ ಮೃತ್ಯು
Update: 2017-08-26 20:50 IST
ಬಂಟ್ವಾಳ, ಆ. 26: ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡು ಗರ್ಭಿಣಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳಪದವು ಪಾತ್ರತೋಟ ಮೂಲದ ಪೌಝಿಯಾ (25) ಮೃತರು ಎಂದು ಗುರುತಿಸಲಾಗಿದೆ. ಎಂಟು ತಿಂಗಳ ಗರ್ಭಿಣಿಯಾಗಿದ್ದ ಅವರು ತಾಯಿ ಮನೆ ಯಲ್ಲಿ ವಾಸವಾಗಿದ್ದರು. ಹದಿನೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ವಿಟ್ಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಆರೋಗ್ಯ ಸುದಾರಿಕೆ ಕಂಡಿತ್ತು. ಶುಕ್ರವಾರ ರಾತ್ರಿ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿದ್ದು, ತುಂಬೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ನಡುವೆ ಮೃತಪಟ್ಟರು ಎಂದು ದೂರಿನಲ್ಲಿ ಹೇಳಲಾಗಿದೆ.