ಬಸ್ ಢಿಕ್ಕಿ: ಕೂಲಿ ಕಾರ್ಮಿಕ ಮೃತ್ಯು
Update: 2017-08-26 21:21 IST
ಕಾಪು, ಆ.26: ಕಟಪಾಡಿ ವಿಜಯಾ ಇಂಡಸ್ಟ್ರೀಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಹೊನ್ನಪ್ಪ (41) ಎಂದು ಗುರುತಿಸಲಾಗಿದೆ.
ಅವರು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಕೇರಳ ರಾಜ್ಯದ ಸರಕಾರಿ ಬಸ್ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಅವರು ಕಟಪಾಡಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.