×
Ad

ಸುಡುಮದ್ದು ಮಾರಾಟದ ಪರವಾನಿಗೆ ಅರ್ಜಿ ಸ್ವೀಕಾರ

Update: 2017-08-27 17:37 IST

ಮಂಗಳೂರು, ಆ. 27: ದೀಪಾವಳಿ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಪಟಾಕಿ, ಸುಡುಮದ್ದುಗಳ ಮಾರಾಟಕ್ಕೆ ಸಾಕಷ್ಟು ಮುಂಚಿತವಾಗಿ ಪರವಾನಿಗೆಯನ್ನು ಪಡೆಯಲು ನಿರ್ದೇಶಿಸಲಾಗಿದೆ. ಇದರಂತೆ 60 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಲು ಮತ್ತು ಸ್ವೀಕರಿಸಿದ ಅರ್ಜಿಗಳನ್ನು 30 ದಿನದೊಳಗಾಗಿ ಪರವಾನಿಗೆಯನ್ನು ಪಡೆಯಲು ತಿಳಿಸಲಾಗಿದೆ.

ಸ್ಫೋಟಕ ಕಾಯಿದೆ ಮತ್ತು ನಿಯಮದಡಿ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಪೊಲೀಸ್ ಆಯುಕ್ತರು, ಮಂಗಳೂರು ನಗರ ಕಚೇರಿಯಲ್ಲಿ ಅರ್ಜಿಗಳನ್ನು ಈಗಾಗಲೇ ಸ್ವೀಕರಿಸಲಾಗುತ್ತಿದೆ.

ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿದೆ. ಅನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ. ಎಂದು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News