ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ: 29 ರಂದು ಕಾರ್ಯಾಗಾರ

Update: 2017-08-27 13:41 GMT

ಮಂಗಳೂರು, ಆ. 27: ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯ ನಗರ ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ ಉಪಘಟಕವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರವನ್ನು ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಮೂಲಕ ಆ. 28ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಸಲಾಗುತ್ತಿದೆ.

 ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಈ ಕಾರ್ಯಾಗಾರ ರಾಜ್ಯದಲ್ಲಿಯೇ ಪ್ರಥಮ ಕಾರ್ಯಾಗಾರವಾಗಿದ್ದು, ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಆ.29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಡೇ ನಲ್ಮ್ ಯೋಜನೆಯ ಕುರಿತು ಮಾಹಿತಿ ಅಧಿವೇಶನವೂ ಒಳಗೊಂಡಂತೆ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣಾ ಅಧಿನಿಯಮ-2014 ಮತ್ತು ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ನಿಯಮಗಳು-2016, ಎಂಬ ವಿಷಯದ ಕುರಿತು ಹಾಗೂ ಬೀದಿ ವ್ಯಾಪಾರ ವಲಯಗಳಲ್ಲಿನ ಸಂಚಾರ ನಿಯಮಗಳು, ನಿಯಮಗಳನ್ನು ಪಾಲಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ಮತ್ತು ನಿರ್ವಹಣೆ ಕುರಿತು ವಿಷಯ ಮಂಡನಾ ಅಧಿವೇಶನಗಳು ನಡೆಯಲಿದೆ.

ಕಾರ್ಯಾಗಾರದ ಕೊನೆಯಲ್ಲಿ ಪ್ರತಿ ನಗರದಲ್ಲಿ ನಗರ ಬೀದಿ ಬದಿ ವ್ಯಾಪಾರ ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಪೂರಕವಾಗಿ ಕಾರ್ಯಯೋಜನೆಯನ್ನು ರೂಪಿಸಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News