×
Ad

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಓರ್ವನ ಬಂಧನ

Update: 2017-08-28 18:33 IST

ಬೆಂಗಳೂರು, ಆ.28: ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿನ ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರದ ನಿವಾಸಿ ಶ್ರೀನಿವಾಸ್(35) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಕೆಂಪೇಗೌಡ ಬಸ್‌ನಿಲ್ದಾಣದ ಬಳಿಯಿಂದ ಪೋqo ಸ್ಟುಡಿಯೋದಲ್ಲಿ ಉದ್ಯೋಗ ಮಾಡುತ್ತೀರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ರವಿವಾರ ಮಧ್ಯಾಹ್ನ 3ರ ವೇಳೆ ಮನೆಯಲ್ಲಿ ಒಂಟಿಯಾಗಿದ್ದ 7ನೆ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆರೋಪಿಯು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ತಾಯಿ ಬಾಲಕಿಯನ್ನು ವಿಚಾರಿಸಿದಾಗ ದುಷ್ಕೃತ್ಯವನ್ನು ತಿಳಿಸಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿದ ಬಸವೇಶ್ವರನಗರ ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿ ಆರೋಪಿ ಶ್ರೀನಿವಾಸ್‌ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News