×
Ad

ಮುಂಡಗೋಡ : ಕಟ್ಟಿಗೆ ಅಕ್ರಮ ಸಾಗಟ : ಓರ್ವನ ಬಂಧನ

Update: 2017-08-28 19:10 IST

ಮುಂಡಗೋಡ,ಆ.28 : ಮುಂಡಗೋಡ ವಲಯದ ಅತ್ತಿವೇರಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಿಗೆಯನ್ನು ಸಾಗಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಸುಮಾರು 40 ಸಾವಿರ ರೂ. ಮೊತ್ತದ ಕಟ್ಟಿಗೆ ವಶಕ್ಕೆ ಪಡೆದಿದ್ದಾರೆ.

ವಲಯ ಅರಣ್ಯಾಧಿಕಾರಿ ಸುರೇಶ ಕುಲ್ಲೋಳ್ಳಿ ಮಾರ್ಗದರ್ಶನದಲ್ಲಿ ಇಂದೂರ ಉಪವಲಯ ಅರಣ್ಯಾಧಿಕಾರಿ ಬಸವರಾಜ ಪೂಜಾರ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿ ಬಸವರಾಜ ಸಕಾಯಿ(39)ಯನ್ನು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಸಿಬ್ಬಂದಿ ರಮೇಶ ಸಜ್ಜನ ದಾಳಿಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News