ಜೆಡಿಎಸ್ ಪ್ರಚಾರ ಸಮಿತಿಗೆ ಎಚ್. ವಿಶ್ವನಾಥ್ ಅಧ್ಯಕ್ಷ
ಬೆಂಗಳೂರು, ಆ.28: ಇತ್ತೀಚೆಗೆ ನಡೆದ ಜೆಡಿಎಸ್ ಕೋರ್ ಕಮಿಟಿಯಲ್ಲಿ ತೀರ್ಮಾನಿಸಿದಂತೆ ಪಕ್ಷದ ರಾಜ್ಯ ಮಟ್ಟದ ವಿವಿಧ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಲಾಗಿದ್ದು, ಜೆಡಿಎಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್.ವಿಶ್ವನಾಥ್ ರನ್ನು ಆಯ್ಕೆ ಮಾಡಲಾಗಿದೆ. ಕುಮಾರಸ್ವಾಮಿ ಕಾರ್ಯನಿರ್ವಹಣಾ ತಂಡಕ್ಕೆ ಎಚ್.ವಿಶ್ವನಾಥ್, ಬಿ.ಎಂ.ಫಾರೂಕ್ ಹಾಗೂ ಬಸವರಾಜ್ ಹೊರಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ಅಧ್ಯಕ್ಷರ ಕಾರ್ಯ ನಿರ್ವಹಣಾ ತಂಡಕ್ಕೆ ಎಚ್.ಸಿ.ನಿರಾವರಿ, ಮಧು ಬಂಗಾರಪ್ಪ ಹಾಗೂ ಝಫ್ರುಲ್ಲಾ ಖಾನ್ ರನ್ನು ಆಯ್ಕೆ ಮಾಡಲಾಗಿದೆ.
ಪ್ರಚಾರ ಸಮಿತಿ ಹಾಗೂ ಐಡಿಯಾ ಲಾಗ್ ನ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್. ವಿಶ್ವನಾಥ್, ಸಂಸದೀಯ ಕಾರ್ಯಮಂಡಳಿ ಅಧ್ಯಕ್ಷರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ರಾಜ್ಯ ಕಾನೂನು ಘಟಕದ ಅಧ್ಯಕ್ಷರಾಗಿ ರಂಗನಾಥ್, ರಾಜ್ಯ ರಾಜಕೀಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿ ಎಚ್.ಸಿ.ನಿರಾವರಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಅರ್ಷಿಯಾ ಅಲಿ, ಕಾರ್ಯಾಧ್ಯಕ್ಷರಾಗಿ ಪ್ರಭಾವತಿ ಜಯರಾಂ, ಬೆಂಗಳೂರು ನಗರ ಉಸ್ತುವಾರಿ ಸಮಿತಿ ಅಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇನ್ನುಳಿದ ಪದಾಧಿಕಾರಿಗಳ ವಿವರ ಈ ಕೆಳಗಿನಂತಿದೆ...