×
Ad

ಬಿಬಿಎಂಪಿ ಆಯುಕ್ತರಿಗೆ ಖುದ್ದು ಹಾಜರಾಗಲು ಹೈಕೋರ್ಟ್ ಆದೇಶ

Update: 2017-08-28 20:48 IST

ಬೆಂಗಳೂರು, ಆ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಉಸ್ತುವಾರಿಗೆ ವಾರ್ಡ್ ಸಮಿತಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಿ ನೋಟಿಫಿಕೇಷನ್ ಹೊರಡಿಸಲು ಬಿಬಿಎಂಪಿ ಆಯುಕ್ತರಿಗೆ ಕಾನೂನಿನಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್ ಈ ಕುರಿತು ಸ್ಪಷ್ಟಿಕರಣ ನೀಡಲು ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.

ಈ ಸಂಬಂಧ ಜಿ.ಆರ್.ಮೋಹನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಸೆಂಪ್ಟೆಂಬರ್ 4ಕ್ಕೆ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ, ಬಿಬಿಎಂಪಿ ಆಯುಕ್ತರಿಗೆ ಖುದ್ದು ಹಾಜರಾಗಲು ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News