ಕಡೂರು;ಅಸೆಂಬ್ಲಿ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ : ಗೋಪಾಲ ಭಂಡಾರಿ
ಕಡೂರು, ಆ. 28: ಮುಂದಿನ 2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗೋಪಾಲ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಸೋಮವಾರ ಪಟ್ಟಣದ ಸುರುಚಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಇತ್ತೀಚಿನ ಮಾದ್ಯಮಗಳ ಸಮೀಕ್ಷೆ ಮತ್ತು ತಾವು ಜಿಲ್ಲೆಯಲ್ಲಿ ಪ್ರವಾಸ ಮಾಡಿದ ಸಂದರ್ಭ ಕಂಡು ಬಂದ ಒಗ್ಗಟ್ಟಿನಿಂದ ಐದು ಕ್ಷೇತ್ರಗಳಲ್ಲೂ ಪಕ್ಷ ಗೆಲುವು ಸಾಧಿಸಲಿದೆ ಎಂದರು.
ರಾಜ್ಯದಲ್ಲಿ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 165 ಭರವಸೆಗಳಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯÀವರು 155 ಬರವಸೆಗಳನ್ನು ಈಡೇರಿಸಿದ್ದಾರೆ. ಆದರೆ ಕೇಂದ್ರದ ಎನ್.ಡಿ.ಎ ನೇತೃತ್ವದ ಮೋದಿ ಸರ್ಕಾರ ನೀಡಿದ ಒಂದೇ -ಒಂದು ಬರವಸೆಗಳನ್ನು ಈಡೇರಿಸಿಲ್ಲ ಎಂದರು.
ರಾಷ್ಟ್ರದ ಹಿತ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದಲ್ಲಿ ಹೊಸರೂಪದಲ್ಲಿ ಸಂಘಟನೆಗೊಳಿಸಲು ಸಂಕಲ್ಪ ಮಾಡಿ ವಿಭಗವಾರು ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮವಹಿಸುವಂತೆ ಮುಖಂಡರು ಕಾರ್ಯಕರ್ತರಿಗೆ ಸಹಕರಿಸುವಂತೆ ತಿಳಿಸಿದರು.
ಗೋಷ್ಟಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ತಾರನಾಥಶೆಟ್ಟಿ, ಕಡೂರು ಮತ್ತು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಹೆಚ್. ಚಂದ್ರಪ್ಪ, ಕೆ.ಎಂ.ವಿನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಾನಂದಸ್ವಾಮಿ, ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ, ಜಿಪಂ ಮಾಜಿ ಅಧ್ಯಕ್ಷ ಕೆ.ಎಂ.ಕೆಂಪರಾಜು, ಕೆ.ಜಿ. ಶ್ರೀನಿವಾಸಮೂರ್ತಿ, ವಕ್ತಾರ ಬಾಸೂರು ಚಂದ್ರಮೌಳಿ, ಎಸ್.ಟಿ.ತಮ್ಮಯ್ಯ ಉಪಸ್ಥಿತರಿದ್ದರು.