ಭಾರೀ ಮಳೆ: ಆ.29ರಂದು ಕೊಡಗಿನ ಶಾಲಾ, ಕಾಲೇಜುಗಳಿಗೆ ರಜೆ
Update: 2017-08-28 23:47 IST
ಮಡಿಕೇರಿ ಆ.28 :ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.29 ರಂದು ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.