×
Ad

ಬೆಂಗಳೂರು: ವಿದ್ಯಾರ್ಥಿ ಆತ್ಮಹತ್ಯೆ

Update: 2017-08-29 21:13 IST

ಬೆಂಗಳೂರು, ಆ.29: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಪಂಗಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಪ್ರವೀಣ್ ರಾಜ್(13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರವೀಣ್‌ರಾಜ್ ಅವರು ವಿನಾಯಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಪೋಷಕರು ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಈತ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News