ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗದಲ್ಲಿ ಗುಡ್ಡ ಕುಸಿತ
Update: 2017-08-29 21:22 IST
ಮಂಗಳೂರು, ಆ.29: ಸುಬ್ರಹ್ಮಣ್ಯ ರಸ್ತೆ ಮತ್ತು ಸಕಲೇಶಪುರ ರೈಲ್ವೆ ಮಾರ್ಗದಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲುಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮೈಸೂರು ವಿಭಾಗದ ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಮಾರ್ಗ ಮಧ್ಯೆ ಗುಡ್ಡ ಕುಸಿತಗೊಂಡಿದ್ದು, ಸಂಚಾರಕ್ಕೆ ತೊಡಕಾಗಿದೆ. ಘಾಟ್ ರೈಲ್ವೆ ಮಾರ್ಗದಲ್ಲಿ ಭಾರೀ ಮಳೆಯ ಪರಿಣಾಮ ಈ ಘಟನೆ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ರೈಲ್ವೆ ಪ್ರಯಾಣಕ್ಕೆ ಸಮಸ್ಯೆಯಾಗಿದೆ. ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ರೈಲ್ವೆ ಪ್ರಕಟನೆ ತಿಳಿಸಿದೆ.