ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ
Update: 2017-08-30 19:31 IST
ಬೆಂಗಳೂರು, ಆ.30: ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ನಿರ್ದೇಶನಾಲಯ ನೀಡುವ ಎನ್‌ಎಸ್‌ಪಿ (ನ್ಯಾಶನಲ್ ಸ್ಕಾಲರ್‌ಶಿಪ್ ಪೋರ್ಟಲ್) ಆಧಾರಿತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಹೊಸದಾಗಿ ಅರ್ಜಿ ಸಲ್ಲಿಸುವ ಹಾಗೂ ಅರ್ಜಿಯ ನವೀಕರಣಕ್ಕೆ ನಿಗದಿಪಡಿಸಿದ್ದ ಕೊನೆಯ ದಿನವನ್ನು ಸೆಪ್ಟಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೆಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.