ಜಾಹೀರಾತು ಫಲಕ ತೆರವುಗೊಳಿಸಲು ಸೂಚನೆ
Update: 2017-08-30 19:49 IST
ಉಡುಪಿ, ಆ.30: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಅಳವಡಿಸಿರುವ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಆದುದರಿಂದ ಎಲ್ಲಾ ಜಾಹೀರಾತುದಾರರು ಈಗಾಗಲೇ ಅಳವಡಿಸಿರುವ ಎಲ್ಲಾ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸುವಂತೆ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.