×
Ad

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

Update: 2017-08-30 19:52 IST

ಬೆಂಗಳೂರು, ಆ.30: ಹುಳಿಮಾವು ಸಮೀಪದ ಕೋಳಿಫಾರಂ ಗೇಟ್ ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ನಗರದ ದೊಡ್ಡಕನ್ನಹಳ್ಳಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪ್ರಕಾಶ್(42) ಎಂಬಾತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್ ಹುಳಿಮಾವು ಕೋಳಿಫಾರಂ ಗೇಟ್ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅವರಿಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಬನ್ನೇರುಘಟ್ಟ ರಸ್ತೆಯ ಚೈತನ್ಯ ಶಾಲೆ ಸಮೀಪ ರಾತ್ರಿ 7:45ರ ಸುಮಾರಿಗೆ ಲಾರಿಯೊಂದು ಢಿಕ್ಕಿ ಹೊಡೆದು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಥಾಮಸ್(59) ಮೃತಪಟ್ಟಿದ್ದಾರೆ.

ಕೋರಮಂಗಲದ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕನಕಪುರ ತಟ್ಟಗುಪ್ಪೆಯ ಥಾಮಸ್ ಅವರು ಕೆಲಸ ಮುಗಿಸಿಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಹುಳಿಮಾವು ಸಂಚಾರ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News