×
Ad

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತಸಂಘದಿಂದ ಸಚಿವರಿಗೆ ಮನವಿ

Update: 2017-08-30 23:15 IST

ಗುಂಡ್ಲುಪೇಟೆ, ಆ.30: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತಸಂಘದ ಮುಖಂಡರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲಗೆ ಮನವಿ ಸಲ್ಲಿಸಿದರು.

ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ತೆರಕಣಾಂಬಿಗೆ ತೆರಳಿ ನಂತರ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪ್ರವಾಸಿ ಮಂದಿರ ಉದ್ಘಾಟಿಸಿದ ಸಂದರ್ಭದಲ್ಲಿ ಆಗಮಿಸಿದ ರೈತ ಸಂಘದ ಮುಖಂಡರು ತಾಲೂಕಿನ ಉಳಿದಿರುವ ಎಲ್ಲಾ ಕೆರೆಗಳಿಗೂ ನೀರು ತುಂಬಿಸಬೇಕು, ರಾಷ್ಟ್ರೀಕೃತ ಬ್ಯಾಂಕು ಮತ್ತು ವಾಣಿಜ್ಯ ಬ್ಯಾಂಕುಗಳ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ರೈತರಿಗಾಗಿ ಬೆಳೆ ಸಂಸ್ಕರಣ ಘಟಕ ಸ್ಥಾಪನೆ, ರೈತರ ಮೇಲಿನ ಎಲ್ಲಾ ಮೊಕ್ಕದಮೆಗಳನ್ನು ವಾಪಸ್ ಪಡೆಯಬೇಕು,  ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕು ಎಂದು ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಕುಂದಕೆರೆ ಸಂಪತ್ತು, ಜಿಲ್ಲಾ ಸಂಘಟನಾಕಾರ್ಯದರ್ಶಿ ಕಡಬೂರು ಮಂಜುನಾಥ್, ಮಾಡ್ರಳ್ಳಿ ಮಹದೇವಪ್ಪ, ಮಹೇಶ್ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News