ಮಂಗಳೂರು ದಕ್ಷಿಣ ವಲಯ ಬ್ಲಾಕ್ ಮಟ್ಟದ ಪ್ರತಿಭಾ ಕಾರಂಜಿ

Update: 2017-08-31 12:47 GMT

ಮಂಗಳೂರು, ಆ.31: ದ.ಕ. ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು, ಮಂಗಳೂರು ದಕ್ಷಿಣ ವಲಯ, ಮಂಗಳೂರು ಹಾಗೂ ಸೈಂಟ್ ಜೋಸೆಫ್ ಪ್ರಾಥಮಿಕ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಲಶೇಖರ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ದಕ್ಷಿಣ ವಲಯದ ಬ್ಲಾಕ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಭಾಗದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಕವಿತಾ ಸನಿಲ್ ಮಕ್ಕಳಲ್ಲಿ ಅಡಗಿದ ಸುಪ್ತ ಪ್ರತಿಭೆಯನ್ನು ಹೊರಹೊಮ್ಮುವಂತೆ ಮಾಡಲು ಇಂತಹ ವೇದಿಕೆಗಳ ಅಗತ್ಯವಿದೆ ಎಂದರು.

ಕೊರ್ಡೆಲ್ ಚರ್ಚ್‌ನ ಧರ್ಮಗುರು ರೆ.ಫಾ. ವಿಕ್ಟರ್ ಮಚಾದೊ ಆಶೀರ್ವಚನ ನೀಡಿದರು. ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಅಧ್ಯಕ್ಷತೆ ವಹಿಸಿದ್ದರು.

ಕಾರ್ಪೊರೇಟರ್ ಭಾಸ್ಕರ್ ಕೆ., ಡಿಡಿಪಿಐ ಸಿಪ್ರಿಯನ್ ಮೊಂತೆರೊ, ತಾಲೂಕು ನೋಡಲ್ ಡಯಟ್ ಅಧಿಕಾರಿ ದಯಾವತಿ, ಸೈಂಟ್ ಜೋಸೆಫ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುನಿತಾ ಡಿಸೋಜ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿ. ವಾಯ್ಲೆಟ್ ಮೊರಾಸ್, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ ಜಗದೀಶ ಶೆಟ್ಟಿ, ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಕೆ.ಮಂಜನಾಡಿ, ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷ ಎಂ.ಎಚ್. ಮಲಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ ಅಶೋಕ್ ಕುಮಾರ್, ಪ್ರೌಢಶಾಲಾ ಸಹಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಸ್ಟ್ಯಾನಿ ತಾವ್ರೊ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ ತ್ಯಾಗಂ ಹರೇಕಳ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ್ ಬಾಗೇವಾಡಿ ಉಪಸ್ಥಿತರಿದ್ದರು.

ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ. ಜ್ಞಾನೇಶ್ ಸ್ವಾಗತಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಗೀತಾ ವಂದಿಸಿದರು. ಸಿ.ಆರ್.ಪಿ.ಸುಗುಣಮ್ಮ, ಮೋಹನ್ ಇನೋಳಿ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರು ದಕ್ಷಿಣ ವಲಯದ ನೋಡಲ್ ಅಧಿಕಾರಿ ಹಿಲ್ಡಾ ಕ್ಲೆಮೆನ್ಸಿಯಾ ಪಿಂಟೊ, ಇ.ಸಿ.ಒ. ಫ್ರಾನ್ಸಿಸ್ ಮಿನೇಜಸ್ ಮತ್ತಿತರರು ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News