ಅಸಾರಾಂ ಬಾಪು ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ಕುಟುಂಬಕ್ಕೆ ಭದ್ರತೆ ಬಿಗಿಗೊಳಿಸಿದ ಪೊಲೀಸರು

Update: 2017-08-31 14:22 GMT

ಲಕ್ನೊ, ಆ.31: ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ಜೈಪುರದ ನ್ಯಾಯಾಲಯದಲ್ಲಿ ನಡೆಯುತ್ತಿರುವಂತೆಯೇ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಗೆ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ.

 ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಗೆ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ , ಭದ್ರತಾ ವ್ಯವಸ್ಥೆ ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯ ಸೋದರನಿಗೆ ಜಿಲ್ಲಾಡಳಿತ ಬಂದೂಕು ಲೈಸೆನ್ಸ್ ನೀಡಲಿದೆ. ಅಲ್ಲದೆ ಭದ್ರತಾ ಸಿಬ್ಬಂದಿಗೆ ಗುಂಡುನಿರೋಧಕ ಜಾಕೆಟ್ ಒದಗಿಸಲಾಗಿದೆ. ಓರ್ವ ಎಸ್‌ಐ ಹಾಗೂ ನಾಲ್ವರು ಕಾನ್‌ಸ್ಟೇಬಲ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ . ಪ್ರದೇಶದಲ್ಲಿ ಗಸ್ತು ತೀವ್ರಗೊಳಿಸುವಂತೆ ಸ್ಥಳೀಯ ಪೊಲೀಸರಿಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ದಿನೇಶ್ ತ್ರಿಪಾಠಿ ತಿಳಿಸಿದ್ದಾರೆ.

ಅಸಾರಾಂ ಬಾಪು ಜೋಧ್‌ಪುರದ ಆಶ್ರಮದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ 2013ರಲ್ಲಿ , (ಆಗ 16ರ ಹರೆಯದಲ್ಲಿದ್ದ) ಮಹಿಳೆ ದೂರು ನೀಡಿದ್ದಳು. ಒಂದು ತಿಂಗಳ ಬಳಿಕ ಅಸಾರಾಂನನ್ನು ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News