ಕುತ್ತಾರು: ಬಸ್ಸಿನಡಿಗೆ ಬಿದ್ದು ಪಾದಚಾರಿ ಮೃತ್ಯು
Update: 2017-08-31 20:59 IST
ಉಳ್ಳಾಲ, ಆ. 31: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಆವರ ಮೇಲೆ ಬಸ್ ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದ ಬಳಿ ಗುರುವಾರ ನಡೆದಿದೆ.
ಬಸ್ ಢಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿಯನ್ನು ಕೇರಳ ಪಯ್ಯನ್ನೂರು ಮೂಲದ ವಲ್ತುರಾಜ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.